ನವದೆಹಲಿ :ಭಾರತದ ಅತಿ ಎತ್ತರದ ವ್ಯಕ್ತಿ ಎಂದು ಹೇಳಿಕೊಳ್ಳುತ್ತಿರುವ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ನವದೆಹಲಿ :ಭಾರತದ ಅತಿ ಎತ್ತರದ ವ್ಯಕ್ತಿ ಎಂದು ಹೇಳಿಕೊಳ್ಳುತ್ತಿರುವ ಧರ್ಮೇಂದ್ರ ಪ್ರತಾಪ್ ಸಿಂಗ್ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಉತ್ತರ ಪ್ರದೇಶದ ಪ್ರತಾಪಗಢದ ಸಿಂಗ್ ಅವರು 2.4 ಮೀ. (8 ಅಡಿ 1 ಇಂಚು) ಎತ್ತರವಿದ್ದಾರೆ.
ಸಮಾಜವಾದಿ ಪಕ್ಷದ ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಅವರು ಸಿಂಗ್ ಅವರ ಪಕ್ಷ ಸೇರ್ಪಡೆಯನ್ನು ಘೋಷಿಸಿದರು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಿಂಗ್ ಸೇರ್ಪಡೆ ಪಕ್ಷವನ್ನು ಬಲಪಡಿಸುತ್ತದೆ ಎಂದು ಹೇಳಿದರು.
'ಸಮಾಜವಾದಿ ಪಕ್ಷದ ನೀತಿಗಳು ಹಾಗೂ ಅಖಿಲೇಶ್ ಯಾದವ್ ಅವರ ನಾಯಕತ್ವದಲ್ಲಿ ನಂಬಿಕೆಯನ್ನು ವ್ಯಕ್ತಪಡಿಸಿ ಇಂದು ಪ್ರತಾಪ್‌ಗಢದ ಧರ್ಮೇಂದ್ರ ಪ್ರತಾಪ್ ಸಿಂಗ್ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡರು. ಸಿಂಗ್ ಆಗಮನದಿಂದ ಸಮಾಜವಾದಿ ಪಕ್ಷ ಮತ್ತಷ್ಟುಶಕ್ತಿಶಾಲಿಯಾಗಲಿದೆ ಎಂದು ರಾಜ್ಯಾಧ್ಯಕ್ಷ ನರೇಶ್ ಉತ್ತಮ್ ಪಟೇಲ್ ಭರವಸೆ ವ್ಯಕ್ತಪಡಿಸಿದರು " ಎಂದು ಸಮಾಜವಾದಿ ವಕ್ತಾರ ರಾಜೇಂದ್ರ ಚೌಧರಿ ಶನಿವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.