ತಿರುವನಂತಪುರ: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರನ್‍ವೇ ಬಳಿ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪಕ್ಷಿಗಳನ್ನು ಓಡಿಸಲು ಪಟಾಕಿ ಸಿಡಿಸಿದ್ದು ಬೆಂಕಿಗೆ ಕಾರಣವಾಯಿತು. ವಿಮಾನ ನಿಲ್ದಾಣದ ಹೊರಗೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆಗಳಾಗಿಲ್ಲ. ವಿಮಾನ ನಿಲ್ದಾಣದ ಸಿಬ್ಬಂದಿ ಕೂಡಲೇ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಆದ್ದರಿಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ಅಪಾಯಕಾರಿಯಾಗಿ ಹರಡುವ ಮುನ್ನವೇ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.