ಎರ್ನಾಕುಳಂ: ಬಿಜೆಪಿ ಕಾರ್ಯಕರ್ತ ವಿನು ಕಡಪ್ಪುರ ಕೊಲೆ ಪ್ರಕರಣದ ಆರೋಪಿಗಳಿಗೆ ಕೆಳ ನ್ಯಾಯಾಲಯ ವಿಧಿಸಿದ್ದ ಏಳು ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟು ನಾಲ್ಕು ವರ್ಷಕ್ಕೆ ಕಡಿತಗೊಳಿಸಿ ತೀರ್ಪು ನೀಡಿದೆ.
ಈ ಹಿಂದೆ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರು ಕೊಲೆ ಪ್ರಕರಣದ ಆರೋಪಿಗಳಿಗೆ ಏಳು ವರ್ಷಗಳ ಶಿಕ್ಷೆ ವಿಧಿಸಿದ್ದರು. ಇದರ ವಿರುದ್ಧ ಆರೋಪಿಗಳು ಹೈಕೋರ್ಟಿಗೆ ಅಪೀಲು ಸಲ್ಲಿಸಿದ್ದರು. ಪ್ರಕರಣದಲ್ಲಿ ಸೋಡಾಬಾಲನ್, ಕೊಗ್ಗು, ಮಹಮ್ಮದ್ ಕುಞÂ, ಬಾಲಕೃಷ್ಣನ್ ಆರೋಪಿಗಳಾಗಿದ್ದಾರೆ. ಪ್ರಕರಣದ ಇನ್ನೊಬ್ಬ ಆರೋಪಿ ಬಾಲಚಂದ್ರನ್ ಎಂಬಾತ ಈ ಹಿಂದೆ ಮೃತಪಟ್ಟಿದ್ದಾನೆ.
1998 ಅ. 9ರಂದು ವಿನು ಅವರನ್ನು ತಂಡ ಕುಂಬಳೆಯ ಜಿಲ್ಲಾ ಸಹಕಾರಿ ಅಸ್ಪತ್ರೆಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಕೊಲೆ ನಡೆಸಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು.