ಬದಿಯಡ್ಕ: ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ನೀರ್ಚಾಲು ಸಮೀಪದ ಕುಕ್ಕಂಕೂಡ್ಲು ಶ್ರೀಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಬುಧವಾರ ವಿವಿಧ ವೈದಿಕ, ಧಾರ್ಮಿಕ ವಿಧಿವಿಧಾನಗಳು ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದ ಋತ್ವಿಜರ ತಂಡದಿಂದ ನಡೆಯಿತು. ಬೆಳಿಗ್ಗೆ 6 ರಿಂದ ಗಣಪತಿಹೋಮ, ತ್ರಿಕಾಲ ಪೂಜೆ, ಸಂಹಾರ ತತ್ವಹೋಮ, ತ್ರಿಕಾಲಪೂಜೆ, ಸಂಹಾರ ತತ್ವಹೋಮ, ತತ್ವಕಲಶ ಪೂಜೆ, ಕುಂಭೇಶ ಕರ್ಕರಿ ಪೂಜೆ, ಶಯ್ಯಾಪೂಜೆ, ತತ್ವಕಲಶಾಭಿಷೇಕ, ಜೀವಕಲಶ ಪೂಜೆ, ಜೀವೋಧ್ವಾಸನೆ, ಜೀವಕಲಶ, ಶಯ್ಯೋನ್ನಯನ, ಅಂಕುರಪೂಜೆ ನಡೆಯಿತು.
10.30 ರಿಂದ ಕಾವುಮಠ ಜಯಭಾರತಿ ಪ್ರಕಾಶ್ ಅವರ ಶಿಷ್ಯೆ ಅಚಲಾ ಪಡಿಯಡ್ಪು ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು. 12.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು. ಸಂಜೆ 5.30 ರಿಂದ ಮಧೂರಿನ ರಾಗಸುಧಾ ತಂಡದಿಂದ ಭಜನಾಮೃತ ನಡೆಯಿತು. 6 ರಿಂದ ಬಿಂಬಶುದ್ದಿ, ಕಲಶಾಭಿಷೇಕ, ಪೀಠಾಧಿವಾಸ, ಧ್ಯಾನಾಧಿವಾಸ, ಅಧಿವಾಸ ಹೋಮ, ಅಧಿವಾಸ ಬಲಿ, ತ್ರಿಕಾಲಪೂಜೆ, ಶಿರಸ್ತತ್ವ ಹೋಮ, ಪುಣ್ಯಾಹ ವಾಚನ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹ ವಿಧಿಗಳು ನೆರವೇರಿತು. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಪ್ರಸಾದ ನಡೆಯಿತು.
ಇಂದಿನ ಕಾರ್ಯಕ್ರಮ: ಜ.27 ರಂದು ಬೆಳಿಗ್ಗೆ 6 ರಿಂದ 108 ಕಾಯಿಗಳ ಗಣಪತಿ ಹೋಮ, ಪ್ರತಿಷ್ಠಾ ಪಾನಿ, ಪ್ರತಿಷ್ಠಾ ಬಲಿ, ಅಂಕುಪೂಜೆ ನಡೆದು, 10.8ರ ಮುಹೂರ್ತದಲ್ಲಿ ಶ್ರೀಸುಬ್ರಹ್ಮಣ್ಯ ಸ್ವಾಮಿ, ಪರಿವಾರ ದೇವರ ಪ್ರತಿಷ್ಠೆ, ಕುಂಭೇಶ ಕಲಶಾಭಿಷೇಕ, ನಿದ್ರಾ ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ 1.30 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 6 ಕ್ಕೆ ಭಜನೆ, ನಿತ್ಯನೈಮಿತ್ತಿಕ ನಿರ್ಣಯ, ಭದ್ರದೀಪವಿಟ್ಟು ಕವಾಟ ಬಂಧನ, ಅಂಕುಪೂಜೆ, ಸೋಪಾನ ಪೂಜೆ ನಡೆಯಲಿದೆ. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ.
ನೃತ್ಯಾರ್ಪಣಂ:
ಬ್ರಹ್ಮಕಲಶೋತ್ಸವದ ಪ್ರಯುಕ್ತ ಜ.27ರಂದು ರಾತ್ರಿ 8 ಗಂಟೆಯಿಂದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಪುತ್ತೂರು ಇವರ ವೈಷ್ಣವಿ ನಾಟ್ಯಾಲಯದ ಬದಿಯಡ್ಕ ಶಾಖೆಯ ವಿದ್ಯಾರ್ಥಿಗಳಿಂದ `ನೃತ್ಯಾರ್ಪಣಂ' ಭರತನಾಟ್ಯ ಪ್ರದರ್ಶನಗೊಳ್ಳಲಿದೆ.