ನವದೆಹಲಿ: 2022ರ ಕೇಂದ್ರ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉಭಯ ಸದನ ಉದ್ದೇಶಿಸಿ ಮಾತನಾಡುತ್ತಿದ್ದಾರೆ.
ತಮ್ಮ ಕರ್ತವ್ಯಗಳಿಗೆ ಆದ್ಯತೆ ನೀಡಿ ಭಾರತದ ಹಕ್ಕುಗಳಿಗಾಗಿ ಹೋರಾಡಿದ ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರಿಗೆ ನಾನು ತಲೆಬಾಗುತ್ತೇನೆ. ಸ್ವಾತಂತ್ರ್ಯದ 75 ವರ್ಷಗಳಲ್ಲಿ ಭಾರತದ ಅಭಿವೃದ್ಧಿ ಪಯಣಕ್ಕೆ ಕೊಡುಗೆ ನೀಡಿದ ಗಣ್ಯರನ್ನು ಗೌರವದಿಂದ ಸ್ಮರಿಸುತ್ತೇನೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ಈ ವರ್ಷದಿಂದ ಕೇಂದ್ರ ಸರ್ಕಾರವು ನೇತಾಜಿಯವರ ಜನ್ಮದಿನವಾದ ಜನವರಿ 23ರಿಂದ ಗಣರಾಜ್ಯೋತ್ಸವ ಆಚರಣೆ ಆರಂಭಿಸಿದೆ. ದೇಶದ ಸುರಕ್ಷಿತ ಭವಿಷ್ಯಕ್ಕಾಗಿ ಇತಿಹಾಸವನ್ನು ನೆನಪಿಟ್ಟುಕೊಳ್ಳುವುದು ಮತ್ತು ಅದರಿಂದ ಕಲಿಯುವುದು ಬಹಳ ಎಂದು ನಮ್ಮ ಸರ್ಕಾರವು ನಂಬುತ್ತದೆ ಎಂದು ತಿಳಿಸಿದರು.
ಇದೇ ವೇಳೆ ಸಾಂಕ್ರಾಮಿಕ ರೋಗ ಮಹಾಮಾರಿ ಕೊರೋನಾ ವಿರುದ್ಧ ಭಾರತ ಯಶಸ್ವಿಯಾಗಿ ಹೋರಾಟ ನಡೆಸುತ್ತಿದ್ದು, ಕೊರೋನಾ ವಾರಿಯರ್ಸ್ಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.