ಇದುವರೆಗೆ ಯಾವ ಉಗ್ರ ಸಂಘಟನೆಯೂ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.
16 ಅಸ್ಸಾಂ ರೈಫಲ್ಸ್ ತಂಡವು ನಿಯಮಿತ ಗಸ್ತು ತಿರುಗುತ್ತಿದ್ದ ಲಿಲಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಲಿಲಾಂಗ್ ಉಶೋಪೋಕ್ಪಿ ಪ್ರದೇಶದಲ್ಲಿ ಮಧ್ಯಾಹ್ನ ಸುಮಾರು 1.30ರ ಹೊತ್ತಿಗೆ ಸ್ಫೋಟ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚುನಾವಣೆ ಹೊಸ್ತಿಲಲ್ಲಿರುವ ಮಣಿಪುರಕ್ಕೆ ಅಮಿತ್ ಶಾ ಭೇಟಿಯ ಮುನ್ನ ದಿನ ಸ್ಫೋಟ ನಡೆದಿದೆ. ಮಣಿಪುರದಲ್ಲಿ ಮಾರ್ಚ್ ತಿಂಗಳಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ.
ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ಮೇಲೆ ನವೆಂಬರ್ 13ರ ಬಳಿಕ ನಡೆದ ಎರಡನೇ ದಾಳಿ ಇದಾಗಿದೆ.
ಮಣಿಪುರಕ್ಕೆ ಮಂಗಳವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, 2014ರಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಹಾಗೂ ಅಭಿವೃದ್ಧಿ ಮರಳಿದೆ ಎಂದು ಹೇಳಿದ್ದರು.