ನವದೆಹಲಿ: ಒಮಿಕ್ರಾನ್ ರೂಪಾಂತರದಿಂದ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ವರದಿಯಾಗುತ್ತಿರುವುದರಿಂದ ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ.
ಒಮಿಕ್ರಾನ್ ಸೋಂಕು ಹರಡದಂತೆ ತಡೆಯಲು ದೇಶದ ಹಲವೆಡೆ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಭಾನುವಾರ ನಡೆದ ಉನ್ನತ ಮಟ್ಟದ ಕೋವಿಡ್ ಪರಾಮರ್ಶನಾ ಸಭೆಯಲ್ಲಿ ಮಾತನಾಡಿದ ಮೋದಿ, ಜಿಲ್ಲಾಮಟ್ಟದಲ್ಲಿ ಸೂಕ್ತ ಆರೋಗ್ಯ ಮೂಲಸೌಕರ್ಯಕ್ಕೆ ವ್ಯವಸ್ಥೆ ಮಾಡಿಕೊಳ್ಳುವಂತೆ ಕರೆ ನೀಡಿದ್ದರು.
ಕೋವಿಡ್ ವಿರುದ್ಧದ ಹೋರಾಟದಲ್ಲಿ ವ್ಯಾಕ್ಸಿನೇಷನ್ ಅತ್ಯಂತ ಪರಿಣಾಮಕಾರಿ ಎಂದು ಪ್ರಧಾನಿ ಮೋದಿ ಹೇಳಿದ್ದರು. ಸಾಂಕ್ರಾಮಿಕ 2020ರಲ್ಲಿ ಆರಂಭವಾದಾಗಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಹಲವು ಬಾರಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ.