ಕಾಸರಗೋಡು: ಮಹಿಳಾ ಮೋರ್ಚಾ ಕಾಸರಗೋಡು ಜಿಲ್ಲಾ ನೂತನ ಸಮಿತಿಯ ಪ್ರಥಮ ಸಭೆ ಬಿಜೆಪಿ ಜಿಲ್ಲಾಸಮಿತಿ ಕಚೇರಿ ಸಭಾಂಗಣದಲ್ಲಿ ಜರುಗಿತು. ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರು ಸಮಾರಂಭ ಉದ್ಘಾಟಿಸಿದರು.
ಬಿಜೆಪಿ ರಾಜ್ಯ ಸಮಿತಿ ಕೋರ್ಡಿನೇಟರ್ ಅಶೋಕನ್ ಕುಳನಡ ಮುಖ್ಯ ಭಾಷಣ ಮಾಡಿದರು. ಮಹಿಳಾ ಮೋರ್ಚಾ ಜಿಲ್ಲಾ ಸಮಿತಿ ಅಧ್ಯಕ್ಷೆ ಪುಷ್ಪಾಗೋಪಾಲನ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರಮಿಳಾ ಸಿ.ನಾಯ್ಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪಿ.ರಮೇಶ್, ಸುಧಾಮ ಗೋಸಾಡ. ಜಿಲ್ಲಾ ಕಾರ್ಯದರ್ಶಿ ಉಮಾ ಕಡಪ್ಪುರ, ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್, ರಾಜ್ಯ ಸಮಿತಿ ಸದಸ್ಯೆ ಶೈಲಜಾ ಭಟ್, ಮಹಿಳಾ ಮೋರ್ಚಾ ಜಿಲ್ಲಾ ಹಾಗೂ ಮಂಡಲ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಗೀತಾ ಬೆಳ್ಳೂರು ಸ್ವಾಗತಿಸಿದರು. ಲಲಿತಾ ವಂದಿಸಿದರು.