ಕುಂಬಳೆ: ಕುಂಬಳೆ ಗ್ರಾಮ ಪಂಚಾಯತಿ ವತಿಯಿಂದ ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶದ ಕಿಟ್ ವಿತರಣೆ ಆರಂಭವಾಗಿದೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಟಿಬಿ ಔಷಧಿ ಸೇವಿಸುತ್ತಿರುವ 23 ಜನರಿಗೆ ಪೌಷ್ಟಿಕಾಂಶ ನೀಡಲಾಗುತ್ತದೆ.
ಪಂಚಾಯಿತಿಯ ವಾರ್ಷಿಕ ಯೋಜನೆಯ ಅಂಗವಾಗಿ ಆರಿಕ್ಕಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಹಿರಾ ಯೂಸುಫ್ ವೈದ್ಯಾಧಿಕಾರಿ ಡಾ.ಸ್ಮಿತಾ ಪ್ರಭಾಕರನ್ ಪಿಳ್ಳೈ ಅವರಿಗೆ ಆಹಾರದ ಕಿಟ್ ಹಸ್ತಾಂತರಿಸಿದರು. ಉಪಾಧ್ಯಕ್ಷ ನಾಸರ್ ಮೊಗ್ರಾಲ್ ಅಧ್ಯಕ್ಷತೆ ವಹಿಸಿದ್ದರು. ಪಂಚಾಯಿತಿ ಸದಸ್ಯ ಅನ್ವರ್ ಹುಸೇನ್, ಆರೋಗ್ಯ ಮೇಲ್ವಿಚಾರಕ ಬಿ.ಅಶ್ರಫ್, ಆರೋಗ್ಯ ನಿರೀಕ್ಷಕಿ ಗನ್ನಿ ಮೋಳ್, ಪಿ.ಎಚ್.ಎನ್.ಸುಜಾತಾ ಮಾತನಾಡಿದರು.