ತಿರುವನಂತಪುರ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಇಂದು ಮಹತ್ತರ ನಿರ್ಧಾರ ತೆಗೆದುಕೊಳ್ಳುವ ಸಾಧದ್ಯತೆಗಳಿವೆ. ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.ಕಾಲೇಜುಗಳನ್ನು ಮುಚ್ಚುವ ಸಾಧ್ಯತೆ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿ ಕಡಿಮೆ ಮಾಡಲು ಕ್ರಮಕೈಗೊಳ್ಳಲಾಗುವುದು.
ವಿವಾಹ ಮತ್ತು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರ ಸಂಖ್ಯೆ 50ಕ್ಕೆ ಇಳಿಸುವ ಸಾಧ್ಯತೆ ಇದೆ. ವಾರಾಂತ್ಯದ ಲಾಕ್‍ಡೌನ್ ಮತ್ತು ರಾತ್ರಿ ಕಫ್ರ್ಯೂ ಪರಿಗಣನೆಯಲ್ಲಿದೆ. ಆದರೆ ಸಂಪೂರ್ಣ ಲಾಕ್ ಡೌನ್ ಹಂತದ ನಿರ್ಧಾರ ಇರದು ಎಂದು ಭಾವಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನಕ್ಕೆ ಅರ್ಧ ಲಕ್ಷ ದಾಟಬಹುದು ಎಂದು ಎಚ್ಚರಿಕೆ ನೀಡಿದ ನಂತರ ನಿಯಂತ್ರಣವನ್ನು ಬಿಗಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿಗಳಲ್ಲದೆ, ಆರೋಗ್ಯ ಸಚಿವರು, ಸ್ಥಳೀಯಾಡಳಿತ ಸಚಿವರು, ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಆರೋಗ್ಯ ತಜ್ಞರು ಕೊರೊನಾ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.