ನವದೆಹಲಿ: ಉದ್ಯೋಗಾಕಾಂಕ್ಷಿಗಳ ಆಕ್ರೋಶ, ಪ್ರತಿಭಟನೆ ಕಾರಣದಿಂದಾಗಿ ಭಾರತೀಯ ರೈಲ್ವೆಯು ತನ್ನ 'ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರೀಜ್' (ಎನ್‌ಟಿಪಿಸಿ) ಹಾಗೂ 'ಲೆವೆಲ್-1' ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ರೈಲ್ವೆ ವಕ್ತಾರರೊಬ್ಬರು ಬುಧವಾರ ತಿಳಿಸಿದ್ದಾರೆ.

ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಉದ್ಯೋಗಾಕಾಂಕ್ಷಿಗಳು, ಪರೀಕ್ಷಾ ವಿಧಾನದ ವಿರುದ್ಧ ಪ್ರತಿಭಟನೆ ನಡೆಸಿದ್ದರು.
ವಿವಿಧ ರೈಲ್ವೆ ನೇಮಕಾತಿ ಮಂಡಳಿಗಳು (ಆರ್‌ಆರ್‌ಬಿ) ನಡೆಸಿರುವ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರ ಹಾಗೂ ಅನುತ್ತೀರ್ಣಗೊಂಡವರ ಅಹವಾಲುಗಳನ್ನು ಆಲಿಸುವ ಸಂಬಂಧ ಉನ್ನತ ಮಟ್ಟದ ಸಮಿತಿಯೊಂದನ್ನು ಸಹ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ದೂರು/ಅಹವಾಲುಗಳನ್ನು rrbcommittee@railnet.gov.in ಈ ವಿಳಾಸಕ್ಕೆ ಕಳುಹಿಸಬೇಕು ಎಂದು ರೈಲ್ವೆ ಅಧಿಕಾರಿಗಳು ಮನವಿ ಮಾಡಿದ್ದಾರೆ.