ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್ ಒಸಿ)ಯಲ್ಲಿ ಗುರುವಾರ ನಡೆದ ನಿಗೂಢ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯ ನಂತರ ಸೇನಾ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ರಜೌರಿಯ ಹಂಜನ್ವಾಲಿ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.