ತಿರುವನಂತಪುರ: ಕೆ ರೈಲು ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ಸರ್ಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಲಾಗಿದೆ.
ಕೋಝಿಕ್ಕೋಡ್ ನಲ್ಲಿ ಸರ್ವೆ ಕಲ್ಲು ಹಾಕಲು ಬಂದಿದ್ದ ನೌಕರರ ಮೇಲೆ ಹಲ್ಲೆ ನಡೆಸಿ 10 ಲಕ್ಷ ರೂಪಾಯಿ ಮೌಲ್ಯದ ಉಪಕರಣಗಳನ್ನು ಧ್ವಂಸಗೊಳಿಸಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕುಂದಾಯಿತ್ತೋಡ್ ನಿವಾಸಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಉಪಕರಣಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕಾವಲ್ ಯೋಜನೆ ನೆಪದಲ್ಲಿ ಕೆ.ರೈಲು ವಿರುದ್ಧದ ಹೋರಾಟ ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ.
ಕೆ ರೈಲ್ ವಿರೋಧಿಸುತ್ತಿರುವ ಸಾಮಾಜಿಕ ಮತ್ತು ಪರಿಸರ ಹೋರಾಟಗಾರರ ಆಧಾರ್ ಕಾರ್ಡ್, ವಿಳಾಸ ಮತ್ತು ಸಾಮಾಜಿಕ ಮಾಧ್ಯಮ ಖಾತೆಯ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಅವರನ್ನು ಗೂಂಡಾಗಳ ಪಟ್ಟಿಗೆ ಸೇರಿಸಿ ನೇರವಾಗಿ ಕರೆ ಮಾಡಿ ಎಚ್ಚರಿಕೆ ನೀಡಲಾಗುತ್ತಿದೆ.