HEALTH TIPS

ಉತ್ತರಪ್ರದೇಶ: ಬಿಜೆಪಿ ತೊರೆದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ

          ಲಖನೌ: ಬಿಜೆಪಿ ತೊರೆದು ಉತ್ತರಪ್ರದೇಶ ಯೋಗಿ ಸಂಪುಟಕ್ಕೆ ಶಾಕ್ ಕೊಟ್ಟಿದ್ದ ಮಾಜಿ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಬಂಧನ ವಾರೆಂಟ್ ಜಾರಿಯಾಗಿದೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಒಂದು ದಿನದೊಳಗೆ ಈ ಬೆಳವಣಿಗೆ ನಡೆದಿದ್ದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

         ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದರು.

       ಸ್ವಾಮಿ ಪ್ರಸಾದ್ ಮೌರ್ಯ ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನೊದಿಗಿನ ಫೋಟೋವನ್ನು ಟ್ವೀಟ್ ಮಾಡಿ, ಸಮಾಜವಾದಿ ಪಕ್ಷ ಸೇರುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು.

          ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಬಿಜೆಪಿಗೆ ರಾಜೀನಾಮೆ ನೀಡಿದ ನಂತರ, ರಾಜ್ಯದ ಇತರ ನಬಿಜೆಪಿ ಶಾಸಕರು ಪಕ್ಷವನ್ನು ತೊರೆದಿದ್ದಾರೆ.

                      ಏನಿದು ಪ್ರಕರಣ?

      ಮದುವೆಯ ಸಂದರ್ಭದಲ್ಲಿ ಗೌರಿ ಅಥವಾ ಗಣೇಶನನ್ನು ಪೂಜಿಸಬಾರದು. ಇದು ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದಾರಿತಪ್ಪಿಸಲು ಮತ್ತು ಗುಲಾಮರನ್ನಾಗಿ ಮಾಡಲು ಮೇಲ್ಜಾತಿ ಪ್ರಾಬಲ್ಯದ ಪಿತೂರಿಯಾಗಿದೆ ಎಂದು ಮೌರ್ಯ ಸಭೆಯೊಂದರಲ್ಲಿ ಹೇಳಿದ್ದರು. ಈ ಘಟನೆ ವೇಳೆ ಅವರು ಬಿಎಸ್ಪಿ ಪಕ್ಷದಲ್ಲಿದ್ದರು.

               ಈ ಪ್ರಕರಣ ಸಂಬಂಧ ನಿನ್ನೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಮೌರ್ಯ ಅವರಿಗೆ ಸೂಚಿಸಲಾಗಿತ್ತು. ಆದರೆ ಅವರು ಹಾಜರಾಗಲಿಲ್ಲ. ಧಾರ್ಮಿಕ ದ್ವೇಷವನ್ನು ಪ್ರಚೋದಿಸುವ ಪ್ರಕರಣದಲ್ಲಿ ಜನವರಿ 24 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ತಿಳಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries