ಬದಿಯಡ್ಕ: ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾ ಮಂದಿರದಲ್ಲಿ ಜರಗಿದ ಕಾಸರಗೋಡು ಬ್ಲಾಕ್ ಮಟ್ಟದ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಸಭೆÉಯಲ್ಲಿ ಬಂಬ್ರಾಣ ಹಾಲು ಉತ್ಪಾದಕ ಸಂಘಕ್ಕೆ ಉತ್ತಮ ಹಾಲು ಸಂಗ್ರಹ ಪ್ರಶಸ್ತಿಯನ್ನು ನೀಡಲಾಯಿತು. ಶಾಸಕ ಎನ್.ಎ.ನೆಲ್ಲಿಕುನ್ನು, ಡೈರಿ ಇಲಾಖೆಯ ಉನ್ನತ ಅಧಿಕಾರಿಗಳು, ಜನಪ್ರತಿನಿಧಿಗಳು, ಮಿಲ್ಮದ ಅಧಿಕಾರಿಗಳು ಪಾಲ್ಗೊಂಡಿದ್ದರು. ಬಂಬ್ರಾಣ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ರವಿಕಲಾ ಎಸ್. ಶೆಟ್ಟಿ ಹಾಗೂ ಕಾರ್ಯದರ್ಶಿ ಶ್ವೇತ, ಸಂಘದ ನಿರ್ದೇಶಕರಾದ ನಾಗರಾಜ ಶೆಟ್ಟಿ, ರವಿಂದ್ರ ಶೆಟ್ಟಿ ಮುಗೇರು ಹಾಜರಿದ್ದರು.