ಮುಂಬೈ: ಮುಂಬೈನ ಮಲಾಡ್ನಲ್ಲಿ ನಿರ್ಮಾಣಗೊಂಡಿರುವ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ಗೆ ಟಿಪ್ಪು ಸುಲ್ತಾನ್ ಹೆಸರು ಇಡಲಾಗಿದ್ದು, ಇದೀಗ ಮುಂಬೈನಲ್ಲಿ ಭಾರಿ ಪ್ರತಿಭಟನೆಗೆ ಕಾರಣವಾಗಿದೆ. ಸಚಿವ ಅಸ್ಲಾಂ ಶೇಖ್ ನಿನ್ನೆ ಕಾಂಪ್ಲೆಕ್ಸ್ ಉದ್ಘಾಟನೆ ಮಾಡಿದ್ದು, ಅದಕ್ಕೆ ಟಿಪ್ಪು ಸುಲ್ತಾನ್ ಎಂದು ನಾಮಕರಣ ಮಾಡಿದ್ದಾರೆ.
ಈ ಹೆಸರು ಇಟ್ಟಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಭಜರಂಗದಳ ಸೇರಿದಂತೆ ವಿವಿಧ ಪಕ್ಷಗಳು ಪ್ರತಿಭಟನೆ ನಡೆಸಿದವು. ಟಿಪ್ಪು ಸುಲ್ತಾನ್ ಹೆಸರು ಇಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ವಿಎಚ್‌ಪಿ ಮುಖಂಡ ಶ್ರೀರಾಜ್ ನಾಯರ್, ಮುಂಬೈನಲ್ಲಿ ಶಾಂತಿ ಕದಡುವ ಉದ್ದೇಶದಿಂದಲೇ ಈ ಹೆಸರು ಇಡಲಾಗಿದೆ. ನಮ್ಮದು ಶಾಂತಿ ಭೂಮಿ. ಹಿಂದೂ ವಿರೋಧಿಯ ಹೆಸರು ಇಟ್ಟಿರುವುದು ಖಂಡನೀಯ ಎಂದಿದ್ದಾರೆ.
ಮುಂಬೈನ ಕ್ರೀಡಾ ಸಂಕೀರ್ಣದ ಹೊರಗಡೆ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿರುವ ಭಜರಂಗ ದಳದ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಿದ್ದಾರೆ.