ಚೆನ್ನೈ: ತಮಿಳುನಾಡಿನಲ್ಲೂ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಟಾಲಿನ್ ಸರ್ಕಾರ ಭಾನುವಾರದಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ.
ರಾಜ್ಯಾದ್ಯಾಂತ ಭಾನುವಾರದಂದು ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದ್ದು, ಶನಿವಾರ ಮೆಗಾ ಕೋವಿಡ್-19 ಲಸಿಕೆ ಅಭಿಯಾನ ನಡೆಯಲಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಅವರು ಬುಧವಾರ ಹೇಳಿದ್ದಾರೆ.
ಹೆಚ್ಚಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಓಮಿಕ್ರಾನ್ ಪಾಸಿಟಿವ್ ಬಂದವರುಎರಡು ಲಸಿಕೆ ಡೋಸ್ ಲಸಿಕೆ ಪಡೆದಿದ್ದರೆ ಮನೆಯಲ್ಲಿ ಪ್ರತ್ಯೇಕವಾಗಿರುವಂತೆ ಸುಬ್ರಮಣಿಯನ್ ಅವರು ಸಲಹೆ ನೀಡಿದ್ದಾರೆ. ಅಲ್ಲದೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ.