ನವದೆಹಲಿ: ಪ್ರಧಾನಿ ಮೋದಿಯವರ ಯೂಟ್ಯೂಬ್ ಚಂದಾದಾರರ ಸಂಖ್ಯೆ 1 ಕೋಟಿ ಮೈಲುಗಲ್ಲು ದಾಟಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಪ್ರಧಾನಿ ಮೋದಿ ಫೇಸ್ ಬುಕ್, ಟ್ವಿಟ್ಟರ್ ನಲ್ಲೂ ಹೆಚ್ಚಿನ ಸಂಖ್ಯೆಯ ಫಾಲೋವರ್ ಗಳನ್ನು ಹೊಂದಿದ್ದಾರೆ.
ಜಾಗತಿಕ ನಾಯಕರ ಪೈಕಿ ಅಮೆರಿಕಾಧ್ಯಕ್ಷ ಜೊ ಬೈಡನ್ ಯೂಟ್ಯೂಬಿನಲ್ಲಿ 7 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದರೆ, ಬ್ರೆಜಿಲ್ ಅಧ್ಯಕ್ಷ ಬೊಲ್ಸೊನಾರೊ 36 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದಾರೆ.
ಇದೇ ವೇಳೆ ದೇಶದ ನಾಯಕರ ಪೈಕಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 5.25 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದರೆ, ಶಶಿ ತರೂರ್ 4.39 ಲಕ್ಷ ಫಾಲೋವರ್ ಗಳನ್ನು ಹೊಂದಿದ್ದಾರೆ.