ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಗಮನಾರ್ಹ ಇಳಿಕೆಯಾಗಿದೆ. ದೇಶದಲ್ಲಿ ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,27,952 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1059 ಮಂದಿ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,20,80,664ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,01,114ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,30,814 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 40,24,7,902ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 16,11,666 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 73,58,04,280 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,68,98,17,199 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.