HEALTH TIPS

ಭಾರತದಲ್ಲಿ ಇಳಿಮುಖವಾಗುತ್ತಿರುವ ಕೊರೋನಾ: ದೇಶದಲ್ಲಿಂದು 1.49 ಲಕ್ಷ ಹೊಸ ಕೇಸ್ ಪತ್ತೆ, 1,072 ಮಂದಿ ಸಾವು

     ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಗಮನಾರ್ಹ ಇಳಿಕೆಯಾಗಿದೆ. ಶುಕ್ರವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,49,394 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1072 ಮಂದಿ ಸಾವಿಗೀಡಾಗಿದ್ದಾರೆ. 

     ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,00,055ಕ್ಕೆ ಏರಿಕೆಯಾಗಿದೆ.

      ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,35,569ಕ್ಕೆ ತಲುಪಿದೆ.

      ಈ ನಡುವೆ ಕಳೆದ 24 ಗಂಟೆಗಳಲ್ಲಿ 2,46,674 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,00,17,088ಕ್ಕೆ ತಲುಪಿದೆ.

       ಭಾರತದಲ್ಲಿ ಒಂದೇ 16,11,666 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 73,58,04,280 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

      ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

      ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,68,47,16,068 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries