ಮುಂಬಯಿ: ಸತತ ಮೂರು ದಿನಗಳಿಂದ ಷೇರುಮಾರುಕಟ್ಟೆ ಸೆನ್ಸೆಕ್ಸ್, ನಿಫ್ಟಿ ಭಾರೀ ಕುಸಿತ ಕಾಣುತ್ತಿದ್ದು, ಜಾಗತಿಕ ಷೇರುಮಾರುಕಟ್ಟೆಯ ವಹಿವಾಟಿನ ಪರಿಣಾಮ ಮಂಗಳವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 180ಕ್ಕೂ ಅಧಿಕ ಅಂಕಗಳ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 187.39 ಅಂಕ ಏರಿಕೆಯಾಗಿದ್ದು, 57,808.58 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 53.15 ಅಂಕಗಳಷ್ಟು ಏರಿಕೆಯೊಂದಿಗೆ 17,266.75 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಟಾಟಾ ಸ್ಟೀಲ್ ಶೇರು ಮೌಲ್ಯ ಶೇ.3.10ರಷ್ಟು ಏರಿಕೆ ಕಂಡಿದೆ. ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ರಿಲಯನ್ಸ್ ಇಂಡಸ್ಟ್ರೀಸ್, ಟೈಟಾನ್, ಏಷ್ಯನ್ ಪೇಂಟ್ಸ್ ಮತ್ತು ಆಯಕ್ಸಿಸ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ.
ನಿಫ್ಟಿ, ಸೆನ್ಸೆಕ್ಸ್ ಏರಿಕೆಯ ನಡುವೆಯೂ ಪವರ್ ಗ್ರಿಡ್, ಟಿಸಿಎಸ್, ಆಲ್ಟ್ರಾಟೆಕ್ ಸಿಮೆಂಟ್, ಟೆಕ್ ಮಹೇಂದ್ರ, ಕೋಟಕ್ ಬ್ಯಾಂಕ್, ಎಲ್ ಆಯಂಡ್ ಟಿ, ಎಚ್ ಡಿಎಫ್ ಸಿ ಬ್ಯಾಂಕ್ ಷೇರುಗಳ ಮೌಲ್ಯ ಶೇ.1.66ರಷ್ಟು ನಷ್ಟ ಕಂಡಿದೆ.
ಭಾರತದ ಷೇರುಪೇಟೆ ಇಂದು ಆರಂಭಿಕ ವಹಿವಾಟಿನಲ್ಲಿ ಲಾಭ, ನಷ್ಟದ ಏರಿಳಿಕೆ ಕಂಡಿದ್ದು, ದಿನಾಂತ್ಯಕ್ಕೆ ಏರಿಕೆಯೊಂದಿಗೆ ವಹಿವಾಟು ಕೊನೆಗೊಂಡಿದೆ. ಕಳೆದ ಮೂರು ದಿನಗಳಲ್ಲಿ ಹೂಡಿಕೆದಾರರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.