HEALTH TIPS

ಕೋವಿಡ್-19: ಸೋಂಕಿತರು-ಸಾವಿನ ಸಂಖ್ಯೆಯಲ್ಲಿ ಏರಿಕೆ, ದೇಶದಲ್ಲಿ 1,72,433 ಹೊಸ ಪ್ರಕರಣ, 1,008 ಮಂದಿ ಸಾವು

     ನವದೆಹಲಿ: ಭಾರತದಲ್ಲಿ ಕೋವಿಡ್ ಮೂರನೇ ಅಲೆಯ ನಡುವೆ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಅಧಿಕವಾಗಿದೆ. 1,72,433 ಹೊಸ ಪ್ರಕರಣಗಳು ವರದಿಯಾಗಿದೆ. ನಿನ್ನೆಗಿಂತ ಶೇಕಡಾ 6.8ರಷ್ಟು ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ 1,008 ಮಂದಿ ಮೃತಪಟ್ಟಿದ್ದಾರೆ. ಕಳೆದೊಂದು ದಿನದಲ್ಲಿ 2,59,107 ಮಂದಿ ಗುಣಮುಖರಾಗಿದ್ದಾರೆ.

      ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,98, 983 ಆಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 15,33,921 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಂಕಿಅಂಶ ತಿಳಿಸಿದೆ.

     ಪ್ರತಿದಿನ ದೇಶದಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರ ದರ ಶೇಕಡಾ 10.99ರಷ್ಟು ಇದೆ. ಇನ್ನು ಭಾರತದಲ್ಲಿ ನಿನ್ನೆ ಒಂದೇ 15,69,449 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 73,41,92,614 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

      ದೇಶದಲ್ಲಿ ಇದುವರೆಗೆ 167.87 ಕೋಟಿ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries