ನವದೆಹಲಿ: ಸೋಮವಾರ ಸಂಜೆ ಏಳು ಗಂಟೆಯವರೆಗೂ 40 ಲಕ್ಷಕ್ಕೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, ಇಲ್ಲಿಯವರೆಗೂ ದೇಶದಲ್ಲಿ ಸುಮಾರು 173.38 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇಲ್ಲಿಯವರೆಗೂ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷಕ್ಕೂ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವವರಿಗೆ ಸುಮಾರು 1.72 ಕೋಟಿ ( 1,76,27,475) ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ. ಅಂತಿಮ ವರದಿ ಬರುವಷ್ಟರಲ್ಲಿ ದೈನಂದಿನ ಲಸಿಕೆ ನೀಡಿಕೆ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ.
ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವುದರೊಂದಿಗೆ ಜ. 16 ರಿಂದ ದೇಶಾದ್ಯಂತ ಲಸಿಕೆ ಅಭಿಯಾನವನ್ನು ಪ್ರಾರಂಭಿಸಲಾಗಿತ್ತು. ಮುಂಚೂಣಿ ಕಾರ್ಯಕರ್ತರಿಗೆ ಫೆಬ್ರವರಿ 6 ರಿಂದ ವ್ಯಾಕ್ಸಿನೇಷನ್ ಆರಂಭವಾಗಿತ್ತು. ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕೂ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ನೀಡಿಕೆ ಆರಂಭವಾಗಿತ್ತು. ಮೇ. 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರು ಲಸಿಕೆ ಪಡೆಯಲು ಅವಕಾಶ ನೀಡಲಾಗಿದೆ.