ನವದೆಹಲಿ: ಭಾರತದಲ್ಲಿ ಕೋವಿಡ್ ಮೂರನೇ ಅಲೆಯ ಸೋಂಕಿನ ತೀವ್ರತೆ ತಗ್ಗುವ ಲಕ್ಷಣ ಕಾಣುತ್ತಿದೆ. ಮೊನ್ನೆ ದೇಶದಲ್ಲಿ ಹೊಸದಾಗಿ 1,67,059 ಕೋವಿಡ್ ಪ್ರಕರಣಗಳು ದಾಖಲಾಗಿದ್ದರೆ, ಕಳೆದ 24 ಗಂಟೆಗಳ ಅವಧಿಯಲ್ಲಿ 1,61,386 ಹೊಸ ಪ್ರಕರಣಗಳು ವರದಿಯಾಗಿವೆ.
ಆದರೆ ಕಳೆದೊಂದು ದಿನದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದ್ದು 1733 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,97, 975 ಆಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 16, 21,603 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಂಕಿಅಂಶ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 2,81,109 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,95,11,307 ಆಗಿದೆ. ಇನ್ನು ಭಾರತದಲ್ಲಿ ನಿನ್ನೆ ಒಂದೇ 17,42,793 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 73,24,39,986 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.