ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ 58,077 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದ್ದು, 657 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,07,177 ಆಗಿದೆ.
ದೇಶದಲ್ಲಿ 58,077 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 6,97,802 ಆಗಿದ್ದು, ಸಾವಿನ ಸಂಖ್ಯೆ 5,07,177ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 1,50,407 ಮಂದಿ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,71,79, 51,432 7 ಡೋಸ್ ಲಸಿಕೆ ವಿತರಿಸಲಾಗಿದೆ. ನಿನ್ನೆ ಒಂದೇ ದಿನ 43 ಲಕ್ಷ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ.