ನವದೆಹಲಿ: ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್-19 ಲಸಿಕೆ ತುರ್ತು ಬಳಕೆಗೆ ಭಾರತದಲ್ಲಿ ಅನುಮತಿ ದೊರೆತಿದೆ.
ಭಾರತದ ಪ್ರಧಾನ ಔಷಧ ನಿಯಂತ್ರಕ (ಡಿಸಿಜಿಐ) ಸ್ಪುಟ್ನಿಕ್ ಲೈಟ್ ಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ತಿಳಿಸಿದ್ದಾರೆ.
ಈ ನಿರ್ಧಾರದಿಂದ ಕೊರೋನಾ ಸಾಂಕ್ರಾಮಿಕದ ವಿರುದ್ಧದ ಹೋರಾಟ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಆರೋಗ್ಯ ಸಚಿವರು ಅಭಿಪ್ರಾಯಪಟ್ಟಿದ್ದಾರೆ. ಶನಿವಾರದಂದು ವಿಷಯ ತಜ್ಞರ ಸಮಿತಿ ರಷ್ಯಾದ ಸ್ಪುಟ್ನಿಕ್ ಲೈಟ್ ಲಸಿಕೆಯನ್ನು ಡಿಸಿಜಿಐ ಗೆ ಶಿಫಾರಸು ಮಾಡಿತ್ತು.