HEALTH TIPS

2ನೇ ಟಿ-20 ಪಂದ್ಯ: ವೆಸ್ಟ್ ಇಂಡೀಸ್ ವಿರುದ್ಧ 8 ರನ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ವಶ

            ಕೊಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತ 8 ರನ್ ಗಳಿಂದ ಗೆಲುವು ಸಾಧಿಸಿದೆ. ಈ ಮೂಲಕ 2-0 ಅಂತರದಲ್ಲಿ ಸರಣಿವನ್ನು ವಶಪಡಿಸಿಕೊಂಡಿದೆ.

               ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ಅವರ ಆಕರ್ಷಕ ಅರ್ಧಶತಕ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 186 ರನ್ ಬೃಹತ್ ಮೊತ್ತ ಕಲೆ ಹಾಕಿತು. 


                ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್  ತಲಾ 52 ರನ್  ಗಳಿಸುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಉಳಿದಂತೆ ನಾಯಕ ರೋಹಿತ್ ಶರ್ಮಾ 19, ಸೂರ್ಯಕುಮಾರ್ ಯಾದವ್ 8,  ವೆಂಕಟೇಶ್ ಅಯ್ಯರ್ 33 ರನ್ ಗಳಿಸಿದರು. ವೆಸ್ಟ್ ಇಂಡೀಸ್ ಪರ ರೊಸ್ಟನ್ ಚೆಸ್ 3 ವಿಕೆಟ್ ಪಡೆದರು.

                  ಟೀಂ ಇಂಡಿಯಾ ನೀಡಿದ ಬೃಹತ್ ಮೊತ್ತ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಪರ ಆರಂಭಿಕ ಆಟಗಾರ ಬ್ರಂಡನ್ ಕಿಂಗ್ 22, ಕೈಲ್ ಮೇಯರ್ಸ್ 9, ನಿಕೋಲಸ್ ಪೂರನ್ 62, ರೋವ್ಮನ್ ಪೊವೆಲ್ 68 ರನ್ ಗಳಿಸಿದರೂ ಪ್ರಯೋಜನವಾಗಲಿಲ್ಲ. ವೆಸ್ಟ್ ಇಂಡೀಸ್ ನಿಗದಿತ 20 ಓವರ್ ಗಳಲ್ಲಿ  ಮೂರು ವಿಕೆಟ್ ನಷ್ಟಕ್ಕೆ 178 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಟೀಂ ಇಂಡಿಯಾ 8 ರನ್ ಗಳಿಂದ ಗೆಲುವಿನ ನಗೆ ಬೀರಿತು. ರಿಷಭ್ ಪಂತ್ ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು

    ಕಾಮೆಂಟ್‌‌ ಪೋಸ್ಟ್‌ ಮಾಡಿ

    0 ಕಾಮೆಂಟ್‌ಗಳು
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    Qries