ಲಖನೌ: ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 62 ರನ್ ಗಳಿಗೆ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 2 ವಿಕೆಟ್ ನಷ್ಟಕ್ಕೆ 199 ರನ್ ಪೇರಿಸಿತ್ತು. ಟೀಂ ಇಂಡಿಯಾ ಪರ ಇಶಾನ್ ಕಿಶನ್ 89 ರನ್ ಹಾಗೂ ಶ್ರೇಯಸ್ ಅಯ್ಯರ್ ಅಜೇಯ 57 ರನ್ ನೆರವಿನೊಂದಿಗೆ ಭಾರತ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಹ ಉತ್ತಮ ಬ್ಯಾಟಿಂಗ್ ಮಾಡಿ 44 ರನ್ ಕಲೆ ಹಾಕಿದ್ದಾರೆ.
ಭಾರತ ನೀಡಿದ 200 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಲಂಕಾ ತಂಡ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಕಲೆ ಹಾಕಿದ್ದು 62 ರನ್ ಗಳಿಗೆ ಭಾರತಕ್ಕೆ ಶರಣಾಯಿತು.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್, ವೆಂಕಟೇಶ್ ಅಯ್ಯರ್ ತಲಾ 2 ವಿಕೆಟ್ ಪಡೆದಿದ್ದಾರೆ. ಚಹಾಲ್ ಮತ್ತು ಜಡೇಜಾ ತಲಾ 1 ವಿಕೆಟ್ ಪಡೆದಿದ್ದಾರೆ.