ತಿರುವನಂತಪುರ: ರಾಜ್ಯದಲ್ಲಿ ಇಂದು 2010 ಮಂದಿಗೆ ಕೋವಿಡ್ ದೃಢಪಟ್ಟಿದೆ. ತಿರುವನಂತಪುರ 332, ಎರ್ನಾಕುಳಂ 324, ಕೊಟ್ಟಾಯಂ 194, ಕೋಝಿಕ್ಕೋಡ್ 186, ಕೊಲ್ಲಂ 152, ತ್ರಿಶೂರ್ 135, ಪತ್ತನಂತಿಟ್ಟ 120, ಆಲಪ್ಪುಳ 113, ಇಡುಕ್ಕಿ 111, ಕಣ್ಣೂರು 89, ಮಲಪ್ಪುರಂ 81, ಪಾಲಕ್ಕಾಡ್ 77, ವಯನಾಡ್ 63, ಕಾಸರಗೋಡು 33 ಎಂಬಂತೆ ಕೊರೊನಾ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 29,545 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 99,446 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 97,454 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ ಮತ್ತು 1992 ಮಂದಿ ಆಸ್ಪತ್ರೆಯ ಕಣ್ಗಾವಲಿನಲ್ಲಿದ್ದಾರೆ. ಒಟ್ಟು 544 ಮಂದಿಯನ್ನು ಹೊಸದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ, 26,560 ಕೊರೋನಾ ಪ್ರಕರಣಗಳಲ್ಲಿ, ಕೇವಲ 7.7 ಶೇಕಡಾ ಜನರು ಆಸ್ಪತ್ರೆಗಳು / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ ಏಳು ಮಂದಿ ಮೃತರಾಗಿದ್ದಾರೆ. ಅದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 42 ಸಾವುಗಳು ಮತ್ತು ಸುಪ್ರೀಂ ಕೋರ್ಟ್‌ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 61 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 65,333ಕ್ಕೆ ಏರಿಕೆಯಾಗಿದೆ. ಇಂದು ಸೋಂಕು ದೃಢಪಟ್ಟವರಲ್ಲಿ ಏಳು ಮಂದಿ ರಾಜ್ಯದ ಹೊರಗಿನಿಂದ ಬಂದವರು. ಅಲ್ಲದೆ 1892 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 89 ಜನರ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು ಇಪ್ಪತ್ತೆರಡು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 5283 ಮಂದಿ ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 517, ಕೊಲ್ಲಂ 835, ಪತ್ತನಂತಿಟ್ಟ 206, ಆಲಪ್ಪುಳ 392, ಕೊಟ್ಟಾಯಂ 427, ಇಡುಕ್ಕಿ 444, ಎರ್ನಾಕುಳಂ 718, ತ್ರಿಶೂರ್ 462, ಪಾಲಕ್ಕಾಡ್ 230, ಮಲಪ್ಪುರಂ 228, ಕೋಝಿಕ್ಕೋಡ್ 351, ವಯನಾಡ್ 295, ಕಣ್ಣೂರು 90, ಕಾಸರಗೋಡು 88 ಮಂದಿ ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 26,560 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 64,06,519 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.