ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಗ್ರಾಮೀಣ ಪ್ರದೇಶಗಳ ಮಕ್ಕಳ ಶಿಕ್ಷಣಕ್ಕೆ ತೊಡಕಾಗಿರುವುದಕ್ಕೆ ‘ವನ್ ಕ್ಲಾಸ್ ವನ್ ಟಿವಿ’ ಆರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.
ಸಂಸತ್ತಿನಲ್ಲಿ 2022-23ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ಕೊರೋನಾ ಕಾರಣದಿಂದ ಶಾಲೆಗಳು ಬಂದ್ ಆಗಿವೆ. ಹೀಗಾಗಿ 1ರಿಂದ 12ನೇ ತರಗತಿ ಮಕ್ಕಳಿಗೆ ಚಾನಲ್ ಮಾಡಲಾಗುವುದು. ಒನ್ ಕ್ಲಾಸ್, ಒನ್ ಟಿವಿ ಚಾನಲ್ ಮಾಡಲಾಗುವುದು ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಒನ್ ಕ್ಲಾಸ್ ಒನ್ ಟಿವಿ ಚಾನೆಲ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಪ್ರಧಾನಿ ‘ಇ-ವಿದ್ಯಾ’ ಯೋಜನೆ ಅಡಿಯಲ್ಲಿ 200 ಚಾನೆಲ್ಗಳು ಅಸ್ತಿತ್ವಕ್ಕೆ ಬರಲಿವೆ ಎಂದು ತಿಳಿಸಿದರು. ಇದೇ ವೇಳೆ 2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಹೇಳಿದರು.