ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 16,051 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟಾರೇ ಸೋಂಕಿನ ಸಂಖ್ಯೆ 42.84 ಮಿಲಿಯನ್ ಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೈನಂದಿನ ಪಾಸಿಟಿವಿಟಿ ದರ ಶೇ. 1.93 ರಷ್ಟಿದ್ದು, ಭಾನುವಾರ ಸೋಂಕಿನಿಂದ 203 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 51,2109 ಆಗಿದೆ. ಹೆಚ್ಚುವರಿ ಹೊಸ ಪ್ರಕರಣಗಳೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇದೀಗ 2,02,131 ಆಗಿದೆ.
ಕಳೆದ 24 ಗಂಟೆಗಳಲ್ಲಿ 37, 901 ಸೋಂಕಿತರು ಗುಣಮುಖದೊಂದಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,21,24284ಕ್ಕೆ ಏರಿಕೆಯಾಗಿದೆ.
ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಬಹುತೇಕ ರಾಜ್ಯಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ತೆರವುಗೊಳಿಸಲಾಗಿದ್ದು, ದೇಶಾದ್ಯಂತ ಶಾಲಾ- ಕಾಲೇಜುಗಳು ಪುನರ್ ಆರಂಭಗೊಂಡಿವೆ. ಪರಿಸ್ಥಿತಿ ಸಹಜತೆಯತ್ತ ಮರಳುತ್ತಿದೆ.