ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 34,113 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ಕೋವಿಡ್ ನಿಂದಾಗಿ 346 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 5,09,011ಕ್ಕೆ ಏರಿಕೆಯಾಗಿದೆ.
ಇಂದಿನ ಹೊಸ ಸೋಂಕು ಪ್ರಕರಣಗಳೊಂದಿಗೆ ದೇಶದಲ್ಲಿನ ಸೋಂಕು ಸಕಾರಾತ್ಮಕ ದರ ಶೇ.3.19ರಷ್ಟಿದೆ. 24 ಗಂಟೆಗಳಲ್ಲಿ ದೇಶಾದ್ಯಂತ 91, 930 ಮಂದಿ ಸೋಂಕಿತರು ಗುಣಮುಖರಾಗಿದ್ದು ಆ ಮೂಲಕ ಗುಣಮುಖರ ಪ್ರಮಾಣ 4,16,77,641ಕ್ಕೇರಿದೆ.
ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,78,882ಕ್ಕೆ ಇಳಿಕೆಯಾಗಿದೆ.