ತಿರುವನಂತಪುರ: ರಾಜ್ಯದಲ್ಲಿ ಇಂದು 29,471 ಮಂದಿಗೆ ಕೋವಿಡ್ ದೃಢಪಡಿಸಲಾಗಿದೆ. ಎರ್ನಾಕುಳಂ 5676, ತಿರುವನಂತಪುರ 5273, ಕೊಟ್ಟಾಯಂ 3569, ಕೊಲ್ಲಂ 2806, ತ್ರಿಶೂರ್ 1921, ಕೋಝಿಕ್ಕೋಡ್ 1711, ಆಲಪ್ಪುಳ 1559, ಮಲಪ್ಪುರಂ 1349, ಪತ್ತನಂತಿಟ್ಟ 1322, ಇಡುಕ್ಕಿ 1252, ಪಾಲಕ್ಕಾಡ್ 1120, ಕಣ್ಣೂರು 1061, ವಯನಾಡ್ 512, ಕಾಸರಗೋಡು 340 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ 95,508 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 4,51,107 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 4,42,162 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾರೆ ಮತ್ತು 8945 ಮಂದಿ ಆಸ್ಪತ್ರೆಗಳಲ್ಲಿ ನಿಗಾದಲ್ಲಿದ್ದಾರೆ. ಒಟ್ಟು 1418 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಸ್ತುತ, 2,83,676 ಕೊರೋನಾ ಪ್ರಕರಣಗಳಲ್ಲಿ, ಕೇವಲ 3.2 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 28 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇದಲ್ಲದೆ, ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ ಹಿಂದಿನ ದಿನಗಳಲ್ಲಿ 205 ಸಾವುಗಳು ಮತ್ತು ಸುಪ್ರೀಂ ಕೋರ್ಟ್‍ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 591 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 59,939ಕ್ಕೆ ಏರಿಕೆಯಾಗಿದೆ.
ಇಂದು ಸೋಂಕು ಪತ್ತೆಯಾದವರಲ್ಲಿ 92 ಮಂದಿ ಹೊರ ರಾಜ್ಯದವರು. 26,963 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 2184 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 232 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ಇಂದು ಒಟ್ಟು 46,393 ಮಂದಿ ಜನರು ಚಿಕಿತ್ಸೆಪಡೆದು ಚೇತರಿಸಿಕೊಂಡಿದ್ದಾರೆ. ತಿರುವನಂತಪುರ 4555, ಕೊಲ್ಲಂ 3361, ಪತ್ತನಂತಿಟ್ಟ 1744, ಆಲಪ್ಪುಳ 2182, ಕೊಟ್ಟಾಯಂ 2697, ಇಡುಕ್ಕಿ 1937, ಎರ್ನಾಕುಳಂ 9692, ತ್ರಿಶೂರ್ 6993, ಪಾಲಕ್ಕಾಡ್ 2673, ಮಲಪ್ಪುರಂ 2417, ಕೋಝಿಕ್ಕೋಡ್ 4160, ವಯನಾಡ್ 1060, ಕಣ್ಣೂರು 2081, ಕಾಸರಗೋಡು 841 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 2,83,676 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 59,79,002 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.