ತಿರುವನಂತಪುರ: ರಾಜ್ಯದಲ್ಲಿ ಇಂದಿನಿಂದ ಶಾಲೆಗಳ ಕಾರ್ಯನಿರ್ವಹಣೆ ಸಹಜ ಸ್ಥಿತಿಗೆ ಮರಳುತ್ತಿದೆ. ಕೊರೋನಾ ವಿಸ್ತರಣೆಯ ನಂತರ ಮುಚ್ಚಲ್ಪಟ್ಟ ವಿದ್ಯಾಲಯಗಳಲ್ಲಿ ಸಂಜೆಯವರೆಗೆ ತರಗತಿಗಳು ಪ್ರಾರಂಭವಾಗಿದ್ದು ಇದೇ ಮೊದಲು. ಇಂದು ಸುಮಾರು 47 ಲಕ್ಷ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲಿದ್ದಾರೆ. ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಸಿದ್ಧವಾಗಿವೆ ಎಂದು ಶಿಕ್ಷಣ ಸಚಿವ ವಿ. ಶಿವಂಕುಟ್ಟಿ ಸ್ಪಷ್ಟಪಡಿಸಿದ್ದಾರೆ.
ಒಂದರಿಂದ ಹತ್ತನೇ ತರಗತಿವರೆಗಿನ ಸುಮಾರು 38 ಲಕ್ಷ ವಿದ್ಯಾರ್ಥಿಗಳು, ಪ್ಲಸ್ ಒನ್ ಮತ್ತು ಪ್ಲಸ್ ಟು ವರೆಗಿನ ಸುಮಾರು 7.5 ಲಕ್ಷ ವಿದ್ಯಾರ್ಥಿಗಳು ಮತ್ತು ವೊಕೇಶನಲ್ ಹೈಯರ್ ಸೆಕೆಂಡರಿ ವಿಭಾಗದಲ್ಲಿ ಸುಮಾರು 65,000 ವಿದ್ಯಾರ್ಥಿಗಳು ಸೋಮವಾರ ಶಾಲೆಗಳನ್ನು ತಲುಪಲಿದ್ದಾರೆ. ಶಾಲೆಗಳು ಕೊರೋನಾ ಮಾನದಂಡಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತವೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಎರಡೂವರೆ ವರ್ಷಗಳಿಂದ ಶಾಲೆಗಳು ಮುಚ್ಚಿದ್ದವು. ಸಾರ್ವಜನಿಕ ಶಿಕ್ಷಣ, ಆರೋಗ್ಯ, ಸಾರಿಗೆ, ಸ್ಥಳೀಯಾಡಳಿತ ಮತ್ತು ಗೃಹ ಇಲಾಖೆಗಳ ಸಮನ್ವಯದೊಂದಿಗೆ ಶಾಲೆಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿವೆ.