HEALTH TIPS

ಭಾರತದಲ್ಲಿ ಕ್ಷೀಣಿಸುತ್ತಿರುವ ಕೊರೋನಾ ಅಬ್ಬರ: ದೇಶದಲ್ಲಿಂದು 67 ಸಾವಿರ ಹೊಸ ಕೇಸ್ ಪತ್ತೆ, 1,188 ಮಂದಿ ಸಾವು

      ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 67,597 ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,188 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

      ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,23,39,611ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,04,062ಕ್ಕೆ ಏರಿಕೆಯಾಗಿದೆ.

     ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,94,891ಕ್ಕೆ ತಲುಪಿದೆ.

     ಈ ನಡುವೆ ಕಳೆದ 24 ಗಂಟೆಗಳಲ್ಲಿ 1,80,456 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,08,40,658ಕ್ಕೆ ತಲುಪಿದೆ.

      ಭಾರತದಲ್ಲಿ ಒಂದೇ 13,46,534ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,29,08,121 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

     ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,70,21,72,615 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.


Video
Copy video url
Play / Pause
Mute / Unmute
Report a problem
Language
Mox Player
ADVERTISEMENT

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,94,891ಕ್ಕೆ ತಲುಪಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries