ಗುವಾಹತಿ: ಅರುಣಾಚಲ ಪ್ರದೇಶದಲ್ಲಿ ಕಳೆದ ಭಾನುವಾರ ಸಂಭವಿಸಿದ ಭೀಕರ ಹಿಮಪಾತದಲ್ಲಿ ಸಿಲುಕಿದ್ದ 7 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.
ಹಿಮಪಾತದಲ್ಲಿ ಸಿಲುಕಿದ್ದ ಎಲ್ಲಾ ಏಳು ಯೋಧರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಸ್ಸಾಂನ ತೇಜ್‌ಪುರ ಮೂಲದ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಹರ್ಷವರ್ಧನ್ ಪಾಂಡೆ ಅವರು ಮಂಗಳವಾರ ಹೇಳಿದ್ದಾರೆ.
"ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಈಗ ಮುಕ್ತಾಯಗೊಂಡಿದೆ. ಹಿಮಪಾತದ ಸ್ಥಳದಿಂದ ಎಲ್ಲಾ ಏಳು ಸೈನಿಕರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರತಿಯೊಬ್ಬರ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ ಎಲ್ಲಾ ಏಳು ಮಂದಿ ಸಾವನ್ನಪ್ಪಿದ್ದಾರೆ” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಅರುಣಾಚಲ ಪ್ರದೇಶದ ಕಮೆಂಗ್ ಸೆಕ್ಟರ್‌ನ ಎತ್ತರದ ಪ್ರದೇಶದಲ್ಲಿ ಹಿಮಪಾತ ಸಂಭವಿಸಿತ್ತು. ಈ ವೇಳೆ ಏಳು ಭಾರತೀಯ ಸೇನೆಯ ಯೋಧರು ಸಿಲುಕಿದ್ದರು. ಈ ಸೇನಾ ಸಿಬ್ಬಂದಿಗಳು ಗಸ್ತು ತಿರುಗುವ ತಂಡದ ಭಾಗವಾಗಿದ್ದರು.