ಕೋಝಿಕ್ಕೋಡ್: 70 ವರ್ಷ ಮೇಲ್ಪಟ್ಟ ಮಹಿಳಾ ಕೈದಿಗಳು ಮತ್ತು ಅನಾನಾರೋಗ್ಯ ಪೀಡಿತ ಖೈದಿಗಳಿಗೆ ವಿನಾಯತಿ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸಲಿದೆ.
ಅವಧಿಗೂ ಮುನ್ನ ಬಿಡುಗಡೆ ಮಾಡುವ ಸಾಧ್ಯತೆಯನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಮುಖ್ಯ ಕಾರ್ಯದರ್ಶಿ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ತಿಳಿಸಿರುವರು.
ಕೋಝಿಕ್ಕೋಡ್‌ನ ಸೇಂಟ್ ಕ್ಸೇವಿಯರ್ ಕಾಲೇಜಿನ ಎನ್‌ಎಸ್‌ಎಸ್ ಸ್ವಯಂಸೇವಕರು ಮಾನವ ಹಕ್ಕುಗಳ ಆಯೋಗಕ್ಕೆ ನೀಡಿದ ದೂರನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಆಯೋಗದ ನ್ಯಾಯಾಂಗ ಸದಸ್ಯ ಕೆ.ಎಸ್. ಬೈಜುನಾಥ್ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಸೂಚನೆ ನೀಡಿದ್ದರು.
ಇದರ ಆಧಾರದ ಮೇಲೆ 70 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಮತ್ತು ಅನಾರೋಗ್ಯದ ವೃದ್ಧರಿಗೆ ಅವಧಿಪೂರ್ವ ಬಿಡುಗಡೆಯನ್ನು ನೀಡುವ ಬಗ್ಗೆ ಪರಿಗಣಿಸುವುದಾಗಿ ಸರ್ಕಾರ ಮಾನವ ಹಕ್ಕುಗಳ ಆಯೋಗಕ್ಕೆ ತಿಳಿಸಿದೆ.