ಪಂಜಾಬ್ : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದ ಮಂಗಳವಾರ, 931 ಜನರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. 117 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಈಗ ಒಟ್ಟು 2,279 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಚಾಮ್‌ಕೌರ್ ಸಾಹಿಬ್ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಚನ್ನಿ ಒಟ್ಟು ಎರಡು ಕ್ಷೇತ್ರಗಳಿಂದ ಕಣಕ್ಕೆ ಇಳಿದಿದ್ದಾರೆ. ಇದೇ 20ರಂದು ಪಂಜಾಬ್‌ನಲ್ಲಿ ಮತದಾನ ನಡೆಯಲಿದೆ
ಮಣಿಪುರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ 10 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಈ ಮೊದಲು ಬಿಡುಗಡೆ ಮಾಡಿದ್ದ ಪಟ್ಟಿಯಲ್ಲಿ 40 ಅಭ್ಯರ್ಥಿಗಳಿಗೆ ಕಾಂಗ್ರೆಸ್ ತನ್ನ ಟಿಕೆಟ್ ಖಾತರಿಪಡಿಸಿತ್ತು. 60 ಸ್ಥಾನಗಳಿಗೆ ನಡೆಯಲಿರುವ ಈ ಚುನಾವಣೆಯಲ್ಲಿ ಪಕ್ಷವು ಈವರೆಗೆ 50 ಮಂದಿಯ ಉಮೇದುವಾರಿಕೆಯನ್ನು ಘೋಷಿಸಿದೆ. ಸಮಾಜವಾದಿ ಪಕ್ಷ, ಎನ್‌ಪಿಪಿ ಸಹ ತಮ್ಮ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿವೆ.