ಕೊಚ್ಚಿ: ನಟಿಯ ಮೇಲಿನ ಹಲ್ಲೆ ಪ್ರಕರಣದ ತನಿಖೆ ಪೂರ್ಣಗೊಳಿಸಲು ಪ್ರಾಸಿಕ್ಯೂಷನ್ ಇನ್ನೂ ಮೂರು ತಿಂಗಳ ಕಾಲಾವಕಾಶ ಕೋರಿದೆ. ಪ್ರಕರಣದ ವಿವರವಾದ ತನಿಖೆಯ ಅಗತ್ಯವಿದೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಇದುವರೆಗಿನ ತನಿಖೆಯ ವಿವರಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಹಸ್ತಾಂತರಿಸಲಾಗಿದೆ.
ಇದೇ ವೇಳೆ, ದಿಲೀಪ್ ಅವರು ತನಿಖೆಯನ್ನು ನಿಲ್ಲಿಸುವಂತೆ ಮತ್ತು ಸಮಯ ಮಿತಿಯನ್ನು ವಿಸ್ತರಿಸದಂತೆ ನ್ಯಾಯಾಲಯವನ್ನು ಕೋರಿದ್ದರು. ನಟಿ ವಿರುದ್ಧದ ಪ್ರಕರಣ ಇದೀಗ ವಿಚಾರಣೆ ಹಂತದಲ್ಲಿದೆ. ಇದನ್ನೇ ನೆಪವಾಗಿಟ್ಟುಕೊಂಡು ತಮ್ಮ ವಿರುದ್ಧ ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ದಿಲೀಪ್ ಆರೋಪಿಸಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದು ದಿಲೀಪ್ ಹೈಕೋರ್ಟ್ ಗೆ ತಿಳಿಸಿದರು.
ಇದಕ್ಕೂ ಮುನ್ನ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ವಿಸ್ತರಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿತ್ತು. ಆದಾಗ್ಯೂ, ತನಿಖೆ ಅಂತಿಮ ಹಂತದಲ್ಲಿದೆ ಮತ್ತು ಕೆಲವು ಡಿಜಿಟಲ್ ಸಾಕ್ಷ್ಯಗಳನ್ನು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ. ಫೆÇೀರೆನ್ಸಿಕ್ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ದಿಲೀಪ್ ಸೇರಿದಂತೆ ಆರೋಪಿಗಳನ್ನು ಮತ್ತೊಮ್ಮೆ ವಿಚಾರಣೆ ನಡೆಸಬೇಕು ಎಂದು ಪ್ರಾಸಿಕ್ಯೂಷನ್ ಹೇಳಿದೆ. ಸತ್ಯಾಸತ್ಯತೆ ಹೊರಬರಲು ಹೆಚ್ಚಿನ ತನಿಖೆಯ ಅಗತ್ಯವಿದೆ ಎಂದು ಅರ್ಜಿಯಲ್ಲಿ ಕಕ್ಷಿದಾರರಾಗಿದ್ದ ನಟಿ ನ್ಯಾಯಾಲಯಕ್ಕೆ ತಿಳಿಸಿದ್ದರು.