ಕುಂಬಳೆ: ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ನೇತೃತ್ವದಲ್ಲಿ ಶ್ರೀ ರಾಮನಾಥ ಸಾಂಸ್ಕøತಿಕ ಭವನದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ, ಭಾಷಾಂತರಕಾರ ಕೋಟೆಕಣಿ ನಿವಾಸಿ ಎ.ನರಸಿಂಹ ಭಟ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿ ಸಭೆ ನಡೆಯಿತು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ಕವಿ, ಲೇಖಕ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅಧ್ಯಕ್ಷತೆ ವಹಿಸಿದರು. ಕಾಸರಗೋಡು ನಗರಸಭಾ ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ, ನ್ಯಾಯವಾದಿ ಸದಾನಂದ ರೈ, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕ ವಾಮನ ರಾವ್ ಬೇಕಲ್, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಮೊದಲಾದವರು ಎ.ನರಸಿಂಹ ಭಟ್ ಅವರ ಗುಣಗಾನ ಮಾಡಿದರು.
ಸಾಂಸ್ಕøತಿಕ ಭವನ ಸಮಿತಿ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಹರೀಶ್ಚಂದ್ರ ಸೂರ್ಲು ವಂದಿಸಿದರು.