ಮಲಪ್ಪುರಂ; ಪೀಠೋಪಕರಣ ಸಾಗಿಸುತ್ತಿದ್ದ ಲಾರಿಗೆ ಪಾದಚಾರಿ ಸಾವನ್ನಪ್ಪಿದ್ದಕ್ಕೆ ಮನನೊಂದ ಲಾರಿ ಚಾಲಕ ನೇಣು ಬಿಗಿದುಕೊಂಡಿದ್ದಾನೆ. ಮಲಪ್ಪುರಂ ಜಿಲ್ಲೆಯ ವೆಟ್ಟಂ ಅಲಿಚೇರಿಯಲ್ಲಿ ಈ ಘಟನೆ ನಡೆದಿದೆ. ಲಾರಿ ಚಾಲಕನನ್ನು ಮುತ್ತಿಯೇರಿ ಬಿಜು (28) ಎಂದು ಗುರುತಿಸಲಾಗಿದ್ದು, ಇವರು ತಮ್ಮ ಮನೆಯ ಮಲಗುವ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಾಲ್ಕು ತಿಂಗಳ ಹಿಂದೆ ಬಿಜು ಪಾಮ್ಸ್ ಫರ್ನಿಚರ್ ಅಂಗಡಿಯಿಂದ ಪುನಲೂರಿಗೆ ಪೀಠೋಪಕರಣಗಳನ್ನು ಸಾಗಿಸುತ್ತಿದ್ದಾಗ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಮೃತಪಟ್ಟಿದ್ದರು. ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ.