ತಿರುವನಂತಪುರ: ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಸುರಕ್ಷತೆಯನ್ನು ಖಾತ್ರಿಪಡಿಸುವ ಕಾನೂನು ಅನುಷ್ಠಾನಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಲು ಮಾರ್ಗಸೂಚಿಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ಧರಿಸಿದೆ ಎಂದು ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕರಡು ಮಾರ್ಗಸೂಚಿಗಳನ್ನು ಸಂಸ್ಕøತಿ ಇಲಾಖೆ ಮತ್ತು ಕಾನೂನು ಇಲಾಖೆ ಪರಿಶೀಲಿಸುತ್ತದೆ ಎಂದರು.
ಚಲನಚಿತ್ರಗಳ ಪ್ರೀ-ಪೆÇ್ರಡಕ್ಷನ್ ಮತ್ತು ಪೋಸ್ಟ್-ಪ್ರ್ರೊಡಕ್ಷನ್ ಸಮಯದಲ್ಲಿ ಎಲ್ಲಾ ಸಮಯದಲ್ಲೂ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮಾರ್ಗಸೂಚಿ ಬರಲಿದೆ ಎಂದು ಸಚಿವರು ಹೇಳಿದರು. ಮಹಿಳಾ ದಿನಾಚರಣೆ ಪ್ರಯುಕ್ತ ಕೇರಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಹಿಳಾ ಅಭಿವೃದ್ಧಿ ನಿಗಮ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಾಗಾರವನ್ನು ಸಚಿವರು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾರ್ಮಿಕ ಸಂಹಿತೆ ಶಿಫಾರಸುಗಳು ಮಹಿಳಾ ಚಲನಚಿತ್ರ ಕಾರ್ಯಕರ್ತರ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದು ಕಾರ್ಯಾಗಾರದ ವಿಷಯವಾಗಿತ್ತು.
ಕ್ಯಾಮೆರಾದ ಮುಂದೆ ಅಥವಾ ಹಿಂದೆ ಮಹಿಳೆಯರ ಉಪಸ್ಥಿತಿಯನ್ನು ಹೆಚ್ಚಿಸುವುದು ಸಬಲೀಕರಣದಲ್ಲಿ ಮುಖ್ಯವಾಗಿದೆ. ಅದಕ್ಕಾಗಿ ಸರಕಾರ ಶ್ರಮಿಸುತ್ತಿದೆ ಎಂದು ಸಚಿವರು ಹೇಳಿದರು. ಪ್ರತಿಯೊಬ್ಬ ಮಹಿಳೆಗೂ ಸ್ವಾಭಿಮಾನದಿಂದ ಬದುಕುವ ಅವಕಾಶ ಸಿಗಬೇಕು. ಸರ್ಕಾರದ ಕಡೆಯಿಂದ ಎಲ್ಲಾ ಮಧ್ಯಸ್ಥಿಕೆಗಳನ್ನು ಮಾಡಲಾಗುವುದು ಎಂದು ಸಚಿವರು ಹೇಳಿದರು.