ತಿರುವನಂತಪುರ: ಉಕ್ರೇನ್‌ನಿಂದ ಬರುವ ಕೇರಳೀಯರಿಗೆ ಗ್ರೀನ್ ಚಾನೆಲ್ ಮೂಲಕ ಆರೋಗ್ಯ ಇಲಾಖೆಯ ವೈದ್ಯಕೀಯ ಸೇವೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಹಾಗೂ ಆರೋಗ್ಯ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.
ರಾಜ್ಯದ ನಾಲ್ಕು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇಡಲು ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ವಿಮಾನ ನಿಲ್ದಾಣಗಳಲ್ಲಿ ಹೆಲ್ತ್ ಡೆಸ್ಕ್ ಗಳನ್ನು ಸ್ಥಾಪಿಸಲಾಗುತ್ತಿದೆ. ತಜ್ಞ ವೈದ್ಯರ ಸೇವೆಯನ್ನು ಇಲ್ಲಿ ಒದಗಿಸಲಾಗುವುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವವರಿಗೆ ತಜ್ಞ ಚಿಕಿತ್ಸೆ ನೀಡಲಾಗುವುದು ಎಂದರು.