ಲಖನೌ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಜಾಮೀನಿನ ಮೇಲೆ ಜೈಲಿನಿಂದ ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲಖಿಂಪುರ ಖೇರಿಯಲ್ಲಿ ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಆಶಿಶ್ ಮಿಶ್ರಾ ಅವರ ಬೆಂಗಾವಲು ಪಡೆಯ ವಾಹನ ಹರಿದು ನಾಲ್ಕು ಮಂದಿ ರೈತರು, ಒಬ್ಬ ಸ್ಥಳೀಯ ಪತ್ರಕರ್ತ ಸೇರಿ ಎಂಟು ಮಂದಿ ಸಾವನ್ನಪ್ಪಿದ್ದರು.
ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರನ್ನು ಎಸ್‌ಐಟಿ ಬಂಧಿಸಿತ್ತು. ನಾಲ್ಕು ತಿಂಗಳ ಬಳಿಕ ಅಲಹಾಬಾದ್ ಕೋರ್ಟ್ ಮಿಶ್ರಾಗೆ ಕಳೆದ ಗುರುವಾರ ಜಾಮೀನು ಮಂಜೂರು ಮಾಡಿತ್ತು.