ಕಾಸರಗೋಡು: ಉದ್ಯೋಗಿಯೊಂದಿಗೆ ಅನುಚಿತವಾಗಿ ವರ್ತಿಸಿದ ಕಾಸರಗೋಡು ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಕಾಸರಗೋಡು ಪ್ರವಾಸೋದ್ಯಮ ಉಪನಿರ್ದೇಶಕ ಥಾಮಸ್ ಆಂಟೋನಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಇಲಾಖಾ ಮುಖ್ಯಸ್ಥರು ಅವರ ವಿರುದ್ಧ ತನಿಖೆಗೂ ಆದೇಶಿಸಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಪರಿಹರಿಸಲು ಜಿಲ್ಲಾ ಮಟ್ಟದಲ್ಲಿ ಆಂತರಿಕ ದೂರು ಪ್ರಾಧಿಕಾರವನ್ನು ಸ್ಥಾಪಿಸಲಾಗಿದೆ. ಘಟನೆ ಕುರಿತು ಪ್ರಾಧಿಕಾರ ತನಿಖೆ ನಡೆಸಿ ಪ್ರವಾಸೋದ್ಯಮ ಇಲಾಖೆಗೆ ವರದಿ ಸಲ್ಲಿಸಿತ್ತು. ಇದರ ಆಧಾರದ ಮೇಲೆ ಉಪನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಲಾಯಿತು.