ತ್ರಿಶೂರ್: ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದಲ್ಲಿ ಗಜ ಓಟ ಈ ವರ್ಷ ನಡೆಯಲಿದೆ. ಕೊರೋನಾ ಮಾನದಂಡಗಳ ಹಿನ್ನೆಲೆಯಲ್ಲಿ ಸೀಮಿತವಾಗಿ ನಡೆಸಲು ಸರ್ಕಾರ ತೀರ್ಮಾನಿಸಿದೆ.
ಮೂರು ಆನೆಗಳು ಮಾತ್ರ ಓಟದಲ್ಲಿ ಪಾಲ್ಗೊಳ್ಳಲಿವೆ. ಕಾರ್ಯಕ್ರಮಕ್ಕೆ ಬರುವವರ ಸಂಖ್ಯೆ ಸೀಮಿತವಾಗಿರಲಿದೆ ಎಂದು ದೇವಸ್ವಂ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 12 ಗಂಟೆಯಿಂದ ಒಳವರ್ತುಲ ರಸ್ತೆಯಿಂದ ಪೂರ್ವ ರಸ್ತೆವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಇಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುವುದಿಲ್ಲ. ಆನೆಗಳ ಓಟ ಇದೇ 14ರಂದು ನಡೆಯಲಿದೆ.