ಕುಂಬಳೆ: ಕುಂಬಳೆ ಪೆರುವಾಡು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಜೀರ್ಣೋದ್ಧಾರ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ ರೂ.1,50,000 ಮೊತ್ತದ ಸಹಾಯಧನದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣರವರು ಭಜನಾ ಮಂಡಳಿಯ ಆಡಳಿತ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಮುಖೇಶ್, ಕುಂಬಳೆ ವಲಯ ಮೇಲ್ವಿಚಾರಕ ರಮೇಶ್, ಸೇವಾಪ್ರತಿನಿಧಿ ಸಂಧ್ಯಾ ಉಪಸ್ಥಿತರಿದ್ದರು.