ಕಾಸರಗೋಡು: ಹೆಚ್ಚುತ್ತಿರುವ ಮಾದಕ ವಸ್ತುಗಳ ಸೇವನೆಯ ವಿರುದ್ಧ ಕಾಞಂಗಾಡ್ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ‘ಡ್ರಗ್ಸ್ ಗೆ ವಿದಾಯ’ ಎಂಬ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕುಟುಂಬಶ್ರೀ ಜಿಲ್ಲಾ ಮಿಷನ್ ಮತ್ತು ಸ್ನೇಹಿತ ಜೆಂಡರ್ ಹೆಲ್ಪ್ ಡೆಸ್ಕ್ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉಪ ಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಉದ್ಘಾಟಿಸಿದರು. ಪ್ರಾದೇಶಿಕ ಕಲ್ಯಾಣಾಧಿಕಾರಿ ಕೆ.ವಿ.ಮುಖೇಶ್ ಅಧ್ಯಕ್ಷತೆ ವಹಿಸಿದ್ದರು. ಕಾಞಂಗಾಡು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶ್ರೀಜಿತ್ ಕೃಷ್ಣನ್ ತರಗತಿ ನಡೆಸಿದರು. ಸಹಾಯಕ ಜಿಲ್ಲಾ ಮಿಷನ್ ಸಂಯೋಜಕ ಪ್ರಕಾಶನ್ ಪಾಲಾಯಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಎಂ. ರೇಷ್ಮಾ, ಸ್ನೇಹಿತೆ ಕೌನ್ಸಿಲರ್ ಇ. ಶೋಭನಾ, ಜಿಲ್ಲಾ ಕಾರಾಗೃಹ ಸಹಾಯಕ ಅಧೀಕ್ಷಕ ಪಿ.ಕೆ.ಷಣ್ಮುಖನ್, ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಜಿಲ್ಲಾ ಕಾರಾಗೃಹ ಅಧೀಕ್ಷಕ ಕೆ. ವೇಣು ಸ್ವಾಗತಿಸಿ, ಎಸ್ ಬಾಬು ವಂದಿಸಿದರು.