ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶನಿವಾರ ದೂರವಾಣಿಯಲ್ಲಿ ಮಾತನಾಡಿದ್ದು, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವೊಲೊಡಿಮಿರ್ ಝೆಲಿನ್ಸ್ಕಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದೇನೆ. 100,000ಕ್ಕೂ ಹೆಚ್ಚು ಆಕ್ರಮಣಕಾರರು ನಮ್ಮ ನೆಲದಲ್ಲಿ ಇದ್ದಾರೆ. ಅವರು ವಸತಿ ಕಟ್ಟಡಗಳ ಮೇಲೆ ಹಿಂದಿನಿಂದ ಬೆಂಕಿ ಹಾಕುತ್ತಿದ್ದಾರೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಾಜಕೀಯವಾಗಿ ತಮ್ಮ ಬೆಂಬಲಿಸುವಂತೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತಮ್ಮನ್ನು ರಾಜಕೀಯವಾಗಿ ಬೆಂಬಲಿಸುವ ಮೂಲಕ ಒಟ್ಟಾಗಿ ಆಕ್ರಮಣವನ್ನು ತಡೆಗಟ್ಟಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಿಕೊಂಡಿರುವುದಾಗಿ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.