ಬದಿಯಡ್ಕ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಶಾಲಾ ಮಕ್ಕಳಲ್ಲಿ ಸೃಜನಶೀಲತೆ ಮತ್ತು ನವೀನ ಚಿಂತನೆಯ ಸಂಸ್ಕøತಿ ಬೆಳಸಲು ನಡೆಸುವ ಇನ್ಸ್ಪಯರ್ ಅವಾರ್ಡ್ ಸ್ಪರ್ಧೆಯಲ್ಲಿ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅನಿಕೇತ್ ಸುಬ್ರಾಯ ಭಟ್ ಕಾಸರಗೋಡು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಪ್ರಶಸ್ತಿಯು 25,000 ರೂ. ಪ್ರೋತ್ಸಾಹ ಧನವನ್ನು ಒಳಗೊಂಡಿದೆ.
ಈತ ಕಾನ ಮೂಡಕರೆ ಮಹೇಶ್ ಭಟ್ ಮತ್ತು ಪಾವನಾ ದಂಪತಿಗಳ ಪುತ್ರ. ಈತನನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಅಭಿನಂದಿಸಿದೆ.